Skip to main content


ಪುನೀತ್ ಅವರೊಟ್ಟಿಗೆ ಅಭಿನಯಿಸುವ ಅವಕಾಶ ಸಿಕ್ಕರೆ, ಸ್ಯಾಂಡಲ್ ವುಡ್ ನಲ್ಲಿ ಕಾಣಿಸಿಕೊಳ್ಳುತ್ತೇನೆ: ತಮನ್ನಾ


ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮಿಲ್ಕಿ ಬ್ಯೂಟಿ ತಮನ್ನಾ ಅವರು ಒಟ್ಟಿಗೆ ಕಾಣಿಸಿಕೊಂಡಿರುವ ಖಾಸಗಿ ಜಾಹೀರಾತಿನ್ನು ನೀವು ನೋಡಿರಬಹುದು. ಆ ಜಾಹೀರಾತಿನಲ್ಲಿ ಬರುವ ಬಟ್ಟೆ ಅಂಗಡಿಯ ಉದ್ಘಾಟನೆಗಾಗಿ ಬೆಂಗಳೂರಿಗೆ ತಮನ್ನಾ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತಾಡಿದ ಅವರು, "ಕನ್ನಡ ಸಿನಿಮಾದಲ್ಲಿ ಖಂಡಿತವಾಗಿಯೂ ಅಭಿನಯಿಸುತ್ತೇನೆ. ಆದರೆ ಆ ಚಿತ್ರದಲ್ಲಿ ಪವರ್ ಸ್ಟಾರ್ ನಾಯಕನಾಗಿ ಅಭಿನಯಿಸಬೇಕು. ಪುನೀತ್ ಅವರೊಟ್ಟಿಗೆ ಅಭಿನಯಿಸುವ ಅವಕಾಶ ಸಿಕ್ಕರೆ, ಸ್ಯಾಂಡಲ್ ವುಡ್ ನಲ್ಲಿ ಕಾಣಿಸಿಕೊಳ್ಳುತ್ತೇನೆ," ಎಂದಿದ್ದಾರೆ.

short by Shraman Jain/read more at Filmibeat Kannada