Skip to main content


"ಕಲ್ಲಡ್ಕ ಕೆಟಿ" ಯಿಂದಲೇ ರಾಹುಲ್‌ ಯಾತ್ರೆ ಶುರು

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಮೂರನೇ ಹಂತದ ಜನಾಶೀರ್ವಾದ ಯಾತ್ರೆ ಕರಾವಳಿ ಭಾಗದಲ್ಲಿ ಮಾರ್ಚ್‌ ಮೊದಲ ವಾರದಲ್ಲಿ ಆರಂಭವಾಗಲಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರದ ‘ಕಲ್ಲಡ್ಕ ಕೆಟಿ’ಯಿಂದಲೇ ಶುರುವಾಗುವುದು ಬಹುತೇಕ ನಿಶ್ಚಿತವಾಗಿದೆ. ರಾಜ್ಯ ಕಾಂಗ್ರೆಸ್‌ ನಾಯಕರು, ಕರಾವಳಿ ಭಾಗದಲ್ಲಿಯೂ ಅದೇ ರೀತಿಯ ಯಾತ್ರೆ ಆಯೋಜಿಸಲು ಭರದ ಸಿದ್ಧತೆ ನಡೆಸಿದ್ದಾರೆ.

ಮಾರ್ಚ್‌ 7 ರಿಂದ 10ರವರೆಗೆ ಅಥವಾ ಮಾರ್ಚ್‌ 12 ರಿಂದ 15ರವರೆಗೆ ಯಾತ್ರೆ ನಡೆಯಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿಯ ಎಲ್ಲ ವಿಧಾನಸಭಾ ಕ್ಷೇತ್ರಗಳ ಮೂಲಕ ಯಾತ್ರೆ ಹಾದು ಹೋಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಜಿಲ್ಲೆಯ ಬಂಟ್ವಾಳ, ಮಂಗಳೂರು, ಮಂಗಳೂರು ದಕ್ಷಿಣ, ಮೂಡುಬಿದಿರೆ, ಮಂಗಳೂರು ಉತ್ತರ, ಪುತ್ತೂರು, ಬೆಳ್ತಂಗಡಿ, ಸುಳ್ಯ ವಿಧಾಸಭಾ ಕ್ಷೇತ್ರಗಳಲ್ಲಿ ರಾಹುಲ್‌ ಸಂಚರಿಸಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಭಾಗದ ಹಿರಿಯ ಕಾಂಗ್ರೆಸ್ಸಿಗರಾದ ಆಸ್ಕರ್‌ ಫರ್ನಾಂಡಿಸ್‌, ಉಭಯ ಜಿಲ್ಲೆಗಳ ಸಚಿವರು, ಶಾಸಕರು ರಾಹುಲ್‌ ಗಾಂಧಿ ಅವರಿಗೆ ಸಾಥ್‌ ನೀಡಲಿದ್ದಾರೆ.

short by: NISHAN PUTHRAN/read more at Prajavani

Comments