Skip to main content


ಬಿಜೆಪಿಯಿಂದ 150 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಅಂತಿಮ

ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿವಸಗಳು ಬಾಕಿ ಉಳಿದಿದ್ದು, ದಿನಾಂಕವೊಂದು ಘೋಷಣೆಯಾಗುವುದು ಬಾಕಿ ಉಳಿದಿದೆ. ಈ ನಡುವೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರಲು ಕಾಯುತ್ತಿರುವ ಬಿಜೆಪಿ ತನ್ನ ಪಕ್ಷದಿಂದ ಕಣಕ್ಕೆ ಇಳಿಯಲಿರುವ ರಾಜ್ಯದ ಸುಮಾರು 150 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಅಂತಿಮಗೊಂಡಿದ್ದು, ಇಂದು ಆ ಪಟ್ಟಿ ಕೇಂದ್ರದ ವರಿಷ್ಠರ ಕೈ ಸೇರಲಿದೆ ಎಂದು ತಿಳಿದು ಬಂದಿದೆ.
ಬಹುತೇಕ ಹಾಲಿ ಎಲ್ಲ ಶಾಸಕರಿಗೆ ಟಿಕೆಟ್ ನೀಡಲು ಬಿಜೆಪಿ ಮುಂದಾಗಿದೆ. ಅಲ್ಲದೆ ಬೇರೆ ಬೇರೆ ಪಕ್ಷಗಳಿಂದ ಬಂದವರಿಗೂ ಟಿಕೆಟ್ ಖಾತರಿಯಾಗಿದೆ. ವಿರಾಜಪೇಟೆಯ ಕೆ.ಜಿ.ಬೋಪಯ್ಯ ಹೊರತುಪಡಿಸಿದರೆ ಬಹುತೇಕ ಎಲ್ಲರಿಗೂ ಟಿಕೆಟ್ ಮೊದಲ ಸುತ್ತಿನಲ್ಲಿ ಘೋಷಣೆಯಾಗಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.    
short by: NP / read more at Karnatakanewsnow.com