Skip to main content


ನಿದಾಸ್‌ ಕಪ್‌ ಟ್ವೆಂಟಿ–20 ಕ್ರಿಕೆಟ್‌: ಬಾಂಗ್ಲಾದೇಶಕ್ಕೆ ಸೋಲು; ಫೈನಲ್‌ ಪ್ರವೇಶಿಸಿದ ಭಾರತ

ನಾಯಕ ರೋಹಿತ್‌ ಶರ್ಮಾ (89; 61ಎ, 5ಬೌಂ, 5ಸಿ) ಮತ್ತು ಸುರೇಶ್‌ ರೈನಾ (47; 30ಎ, 5ಬೌಂ, 2ಸಿ) ಅವರ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ ಭಾರತ ತಂಡ ನಿದಾಸ್‌ ಕಪ್ ಟ್ವೆಂಟಿ–20 ಕ್ರಿಕೆಟ್‌ ಸರಣಿಯ ಪಂದ್ಯದಲ್ಲಿ 17ರನ್‌ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿದೆ. ಇದರೊಂದಿಗೆ ಫೈನಲ್‌ಗೆ ಲಗ್ಗೆ ಇಟ್ಟಿದೆ. ಬುಧವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್‌ ಮಾಡಿದ ರೋಹಿತ್‌ ಪಡೆ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 176ರನ್‌ ದಾಖಲಿಸಿತು. ಗುರಿ ಬೆನ್ನಟ್ಟಿದ ಬಾಂಗ್ಲಾ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 159 ರನ್‌ ಗಳಿಸಲಷ್ಟೇ ಶಕ್ತವಾಯಿತು. ಇನಿಂಗ್ಸ್‌ ಆರಂಭಿಸಿದ ಭಾರತಕ್ಕೆ ನಾಯಕ ರೋಹಿತ್‌ ಮತ್ತು ಶಿಖರ್‌ ಧವನ್‌ (35; 27ಎ, 5ಬೌಂ, 1ಸಿ) ಭದ್ರ ಅಡಿಪಾಯ ಹಾಕಿಕೊಟ್ಟರು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡಿತು. ಲಿಟನ್‌ ದಾಸ್‌ (7) ಮತ್ತು ಸೌಮ್ಯ ಸರ್ಕಾರ್‌ (1) ಬೇಗನೆ ಪೆವಿಲಿಯನ್‌ ಸೇರಿಕೊಂಡರು. ವಿಕೆಟ್‌ ಕೀಪರ್‌ ಮುಷ್ಫಿಕರ್‌ ರಹೀಮ್‌ (ಔಟಾಗದೆ 72; 55ಎ, 8ಬೌಂ, 1ಸಿ) ಹೋರಾಟಕ್ಕೆ ಫಲ ಸಿಗಲಿಲ್ಲ.     
short by: PRAJWAL POOJARY / read more at Prajavani