Skip to main content


ಹನಿಟ್ರ್ಯಾಪ್ ಮಾಡಿ 4.85ಲಕ್ಷ ರೂ. ಪಡೆದಿದ್ದರೂ, ಮತ್ತೆ ಸಿಂಗಲ್ ಸೆಟ್ಲ್ ಮೆಂಟ್ ಗೆ ಮಹಿಳೆಯಿಂದ ಬ್ಲ್ಯಾಕ್ ಮೇಲ್!

ಬೆಂಗಳೂರಿನಲ್ಲಿ ನೆಲೆಸಿರುವ ಮೂಡಿಗೆರೆ ಮೂಲದ ಮಹಿಳೆಯಿಂದ ಚಿಕ್ಕಮಗಳೂರಿನ ಯುವಕನೊಬ್ಬ ಹನಿಟ್ರ್ಯಾಪ್‍ಗೆ ಒಳಗಾಗಿ 4.85 ಲಕ್ಷ ರೂ. ಸಾವಿರ ಕಳೆದುಕೊಂಡು ಆಕೆಯಿಂದ ಮತ್ತೆ ಬ್ಲ್ಯಾಕ್ ಮೇಲ್‍ಗೆ ಒಳಗಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ನಗರದ ಕಲ್ಯಾಣ ನಗರದ ನಿವಾಸಿ ಗೌರಿ ಶಂಕರ್ ಗೆಕಳೆದೊಂದು ವರ್ಷದ ಹಿಂದೆ ಫೇಸ್ ಬುಕ್‍ನಲ್ಲಿ ಮೈತ್ರಿಯ ಪರಿಚಯವಾಗಿತ್ತು. ಸ್ನೇಹ ಪ್ರೀತಿಯಾಗಿ ಇಬ್ಬರ ನಡುವೆ ಸಾಕಷ್ಟು ಬಾರಿ ದೈಹಿಕ ಸಂಪರ್ಕ ಕೂಡ ನಡೆದಿತ್ತು.

ಗೌರಿ ಶಂಕರ್ ನಿಂದ ಇದೂವರೆಗೆ ಸುಮಾರು 4 ಲಕ್ಷದ 85 ಸಾವಿರ ಹಣ ಪಡೆದಿರುವ ಮೈತ್ರಿ ಸಿಂಗಲ್ ಸೆಟ್ಲ್ ಮೆಂಟ್‍ಗಾಗಿ ಮತ್ತೆ ಐದು ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾಳೆ. ಆಕೆಗೆ ಹಣ ಕೊಟ್ಟು ಸುಸ್ತಾಗಿರುವ ಗೌರಿಶಂಕರ್ ಮಾನಸಿಕ ನೆಮ್ಮದಿಗಾಗಿ ಮಾಧ್ಯಮಗಳು ಹಾಗೂ ಪೊಲೀಸರ ಮೊರೆ ಹೋಗಿದ್ದಾರೆ.     

short by NP / read more at Public TV

Comments