Skip to main content


ಚುನಾವಣೆ ಎಫೆಕ್ಟ್: ರಾಜ್ಯದ ಜನತೆಗೆ ಗುಡ್ ನ್ಯೂಸ್

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ಸದ್ಯಕ್ಕೆ ಗುಡ್ ನ್ಯೂಸ್ ಸಿಕ್ಕಿದೆ. ವಿಧಾನಸಭೆ ಚುನಾವಣೆ ಘೋಷಣೆಯಾಗಿರುವುದರಿಂದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ವಿದ್ಯುತ್ ದರ ಪರಿಷ್ಕರಣೆಯ ಹೊಸ ದರ ಪಟ್ಟಿಯನ್ನು ಪ್ರಕಟಿಸುವಂತಿಲ್ಲ.

ಮಂಡಳಿ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ದರ ಪರಿಷ್ಕರಣೆ ಪಟ್ಟಿ ಪ್ರಕಟಿಸಬೇಕಿತ್ತು. ಇದಕ್ಕಾಗಿ ಸಿದ್ಧತೆ ಕೂಡ ನಡೆಸಲಾಗಿತ್ತು. ಆದರೆ, ಚುನಾವಣೆ ಘೋಷಣೆಯಾಗಿರುವುದರಿಂದ 2 ತಿಂಗಳ ಬಳಿಕ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ.

ದರ ಪರಿಷ್ಕರಣೆಗೂ ಸರ್ಕಾರಕ್ಕೂ ಸಂಬಂಧವಿಲ್ಲದಿದ್ದರೂ, ಚುನಾವಣೆ ವೇಳೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಮಂಡಳಿ ಸದ್ಯಕ್ಕೆ ಹೊಸ ದರ ಪಟ್ಟಿ ಪ್ರಕಟಿಸುತ್ತಿಲ್ಲ. ದರ ಪರಿಷ್ಕರಣೆ ಹೊರ ಬೀಳದಿರುವುದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಪಾರಾಗಿದೆ. ಚುನಾವಣೆ ಮುಗಿದ ಬಳಿಕ ಅಂದರೆ, ಜೂನ್ ತಿಂಗಳಿದ ಹೊಸ ವಿದ್ಯುತ್ ದರ ಜಾರಿಯಾಗಬಹುದು.  

short by Pawan / read more at Kannadadunia

Comments