Skip to main content


ಶಿವಮೊಗ್ಗ: ಸಿಡಿಲು ಬಡಿದು ಇಬ್ಬರು ಮೃತ್ಯು; ನಾಲ್ಕು ಎತ್ತುಗಳ ಸಾವು

ಭಾನುವಾರ ಹೊಸನಗರ ತಾಲೂಕಿನ ರಿಪ್ಪನ್‍ಪೇಟೆ ಸುತ್ತಮುತ್ತ ಗುಡುಗು ಸಹಿತ ಭಾರೀ ಮಳೆಯಾಗಿದೆ. ಈ ವೇಳೆ ಬಿಳಕಿ ಗ್ರಾಮದಲ್ಲಿ ರಾಮಪ್ಪ (55) ಎಂಬುವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಇವರು ಮನೆಯ ಅಂಗಳದಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಕುಸಿದು ಬಿದ್ದಿದ್ದರು. 
ತಕ್ಷಣವೇ ಅವರನ್ನು ಕುಟುಂಬದವರು ಉಪಚರಿಸಿ ರಿಪ್ಪನ್‍ಪೇಟೆ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು, ಅಲ್ಲಿ ವೈದ್ಯರಿಲ್ಲದ ಕಾರಣದಿಂದ ಆಯನೂರು ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂಧ ರಿಪ್ಪನ್‍ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.     
short by: NP / read more at Varthabharati.in