Skip to main content


ಭಾರತಕ್ಕೆ ಜಯ ಅನಿವಾರ್ಯ

ಮೊದಲ ಪಂದ್ಯದಲ್ಲಿ ಮುಗ್ಗರಿಸಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡದವರು ಈಗ ಜಯ ಗಳಿಸಲೇಬೇಕಾದ ಒತ್ತಡದಲ್ಲಿದ್ದಾರೆ. ಗುರುವಾರ ನಡೆಯುವ ಎರಡನೇ ಏಕದಿನ ಪಂದ್ಯದಲ್ಲಿ ಮಿಥಾಲಿ ರಾಜ್‌ ಬಳಗವು ಆಸ್ಟ್ರೇಲಿಯಾ ಎದುರು ಆಡಲಿದೆ. ಸರಣಿ ಜಯದ ಆಸೆ ಜೀವಂತವಾಗಿಟ್ಟುಕೊಳ್ಳಬೇಕಾದರೆ ಭಾರತ ಈ ಪಂದ್ಯದಲ್ಲಿ ಗೆಲ್ಲಲೇಬೇಕು. ಸೋಮವಾರ ನಡೆದಿದ್ದ ಮೊದಲ ಪಂದ್ಯದಲ್ಲಿ ಆತಿಥೇಯರು 8 ವಿಕೆಟ್‌ಗಳಿಂದ ಸೋತಿದ್ದರು. ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ತಂಡ 201ರನ್‌ಗಳಿಗೆ ಆಲೌಟ್‌ ಆಗಿತ್ತು. ಮಿಥಾಲಿ ರಾಜ್‌ ಅನುಪಸ್ಥಿತಿಯೂ ಹಿನ್ನಡೆಯಾಗಿ ಪರಿಣಮಿಸಿತ್ತು. ಯುವ ಆಟಗಾರ್ತಿ ಜೆಮಿಮಾ ರಾಡ್ರಿಗಸ್‌, ಹರ್ಮನ್‌ಪ್ರೀತ್‌ ಕೌರ್‌, ದೀಪ್ತಿ ಶರ್ಮಾ ಮತ್ತು ಕರ್ನಾಟಕದ ವೇದಾ ಕೃಷ್ಣಮೂರ್ತಿ ಆರಂಭಿಕ ಪಂದ್ಯದಲ್ಲಿ ಬೇಗನೆ ವಿಕೆಟ್‌ ನೀಡಿದ್ದರು. ಇವರು ಗುರುವಾರ ರಿಲಯನ್ಸ್‌ ಕ್ರೀಡಾಂಗಣದಲ್ಲಿ ಮಿಂಚುವ ಹುಮ್ಮಸ್ಸಿನಲ್ಲಿದ್ದಾರೆ. ಅನುಭವಿ ಆಟಗಾರ್ತಿ ಮಿಥಾಲಿ ಈ ಪಂದ್ಯದಲ್ಲಿ ಕಣಕ್ಕಿಳಿಯುವ ನಿರೀಕ್ಷೆ ಇದೆ.      
short by: NP / read more at Prajavani