Skip to main content


ರೋಹಿತ್‌ ಪಡೆಗೆ ಪ್ರಶಸ್ತಿ ಕನಸು

ರೋಹಿತ್ ಶರ್ಮಾ ನಾಯಕತ್ವದ ಭಾರತ ಕ್ರಿಕೆಟ್ ತಂಡ ತ್ರಿಕೋನ ಟ್ವೆಂಟಿ–20 ಕ್ರಿಕೆಟ್ ಸರಣಿಯ ‘ನಿದಾಸ್ ಕಪ್’ ಗೆಲ್ಲುವ ಛಲದಲ್ಲಿದೆ. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಬಾಂಗ್ಲಾದೇಶ ತಂಡ ರೋಹಿತ್‌ ಶರ್ಮಾ ಬಳಗದ ಎದುರಾಳಿ. ಆತಿಥೇಯ ಶ್ರೀಲಂಕಾವನ್ನು  ಲೀಗ್ ಹಂತದಲ್ಲಿ ಎರಡು ಬಾರಿ ಮಣಿಸಿದ ಬಾಂಗ್ಲಾ  ಫೈನಲ್‌ನಲ್ಲಿ ಕಣಕ್ಕೆ ಇಳಿಯಲಿದೆ. ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ಆಡುತ್ತಿರುವ ಭಾರತದ ಯುವ ಆಟಗಾರರು ಸರಣಿಯಲ್ಲಿ ಉತ್ತಮ ಸಾಮರ್ಥ್ಯ ತೋರಿದ್ದಾರೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಭಾರತ ತಂಡ ಮೊದಲ ಪಂದ್ಯದಲ್ಲಿ ಆತಿಥೇಯರ ವಿರುದ್ಧ  ಸೋತಿತ್ತು. ನಂತರದ ಮೂರು ಪಂದ್ಯಗಳಲ್ಲಿ ಸತತ ಜಯ ಗಳಿಸಿತ್ತು. ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ  ರೋಹಿತ್‌ ಕೊನೆಯ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದರು.          
Short by: Prajwal / read more at Prajavani