Skip to main content


ಮಂಗಳೂರಿನಲ್ಲಿ ತುಳುವಿನಲ್ಲಿ ಭಾಷಣ ಆರಂಭಿಸಿದ ರಾಹುಲ್ ಗಾಂಧಿ

ಮುಂಬರುವ ವಿಧಾನ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಕರಾವಳಿಯ ಅವಳಿ ಜಿಲ್ಲೆಗಳಿಗೆ ಎಐಸಿಸಿ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರು ಮಂಗಳೂರು ಸಂಜೆ ಮಂಗಳೂರಿನಲ್ಲಿ “ಜನಾಶೀರ್ವಾದ ಯಾತ್ರೆ’ಯಲ್ಲಿ ಪಾಲ್ಗೊಂಡು ನಗರದ ನೆಹರು ಮೈದಾನದ ಉತ್ತರ ದಿಕ್ಕಿಗೆ ಹಾಕಲಾದ ಬೃಹತ್ ವೇದಿಕೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದ ಆರಂಭದಲ್ಲಿ “ನಿಕ್ಲೆಗ್ ಮಾತೆರ್‌ಗ್ಲಾ ಎನ್ನ ನಮಸ್ಕಾರ” ಎಂದು ಹೇಳುವ ಮೂಲಕ ರಾಹುಲ್ ಗಾಂಧಿಯವರು ತುಳುವಿನಲ್ಲಿ ಭಾಷಣ ಆರಂಭಿಸಿದರು .ಜನಾಶೀರ್ವಾದ ಸಮಾವೇಶವನ್ನು ಉದ್ದೇಶಿಸಿ ತುಳುವಿನಲ್ಲಿ ಭಾಷಣ ಪ್ರಾರಂಭಿಸಿದ ರಾಹುಲ್ ಗಾಂಧಿಯವರು ನೆರೆದ ಜನರ ಚಪ್ಪಾಳೆ ಗಿಟ್ಟಿಸಿದರು. 
    
short by: NP / read more at Kannadi gaworld.com