Skip to main content


ಕಾಜಲ್ ಅಗರ್ವಾಲ್ ಗೆ ಪ್ರಧಾನಿ ನರೇಂದ್ರ ಮೋದಿ ಪತ್ರವೊಂದನ್ನು ಬರೆದಿದ್ದಾರೆ

ಮೋದಿ ಮಾರ್ಚ್ 7ರಂದು ಪತ್ರ ಬರೆದಿದ್ದು, ಈ ಬಗ್ಗೆ ಕಾಜಲ್ ಅಗರ್ವಾಲ್ ಟ್ವೀಟ್ ಮಾಡಿದ್ದಾರೆ. ಪತ್ರದಲ್ಲಿ ಕೇಂದ್ರ ಸರ್ಕಾರದ `ಬೇಟಿ ಬಚಾವೋ, ಬೇಟಿ ಪಡಾವೋ’ ಹಾಗೂ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿಗೆ ನ್ಯಾಷನಲ್ ನ್ಯೂಟ್ರಿಷನ್ ಮಿಷನ್ ಯೋಜನೆಗಳ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.
ಕಾಜಲ್ ಅಗರ್ವಾಲ್ ಟ್ವಿಟ್ಟರ್ ನಲ್ಲಿ ಮೋದಿ ಬರೆದ ಪತ್ರವನ್ನು ಶೇರ್ ಮಾಡಿದ್ದಾರೆ. ಮಹಿಳಾ ದಿನಾಚರಣೆಗೆ ಶುಭ ಕೋರಿದ ಪ್ರಧಾನಿಗೆ ಧನ್ಯವಾದ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರ ಕೈಗೊಂಡಿರುವ ಯೋಜನೆಗಳನ್ನು ಮೆಚ್ಚಿಕೊಂಡಿರುವ ನಟಿ, ತಾವು ಕೂಡ ಬೆಂಬಲ ನೀಡುವುದಾಗಿ ಪ್ರತಿಕ್ರಿಯಿಸಿದ್ದಾರೆ.      
short by: NP / read more at Publictv.in