Skip to main content


ಬೆಂಕಿಗೆ ಆಹುತಿಯಾದ ಶಾಲಾ ಬಸ್.

ತಾಂತ್ರಿಕ ದೋಷದಿಂದ ಶಾಲಾ ವಾಹನಕ್ಕೆ ಬೆಂಕಿ ತಗುಲಿದ ಪರಿಣಾಮ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ನಿನ್ನೆ ಮುಂಜಾನೆ ಸಂಭವಿಸಿದೆ.

ಇಲ್ಲಿನ ಪ್ರತಿಷ್ಠಿತ ಕೆವಿಜಿ ಶಿಕ್ಷಣ ಸಂಸ್ಥೆಗೆ ಸೇರಿದ ಬಸ್ಸು ಇದಾಗಿದ್ದು, ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿ ಉರಿದಿದೆ. ಇಂದು ಮುಂಜಾನೆ ಶಾಲಾ ಮಕ್ಕಳನ್ನು ಕರೆತರಲು ತೆರಳುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಘಟನೆ ನಡೆದ ಸಂದರ್ಭ ಬಸ್ಸಿನಲ್ಲಿ ಮಕ್ಕಳು ಇರದ ಕಾರಣ ಯಾವುದೇ ದುರಂತ ಸಂಭವಿಸಿಲ್ಲ.

Short by Pawanraj / read more at Karavali Karnataka