Skip to main content


ಕಣ್ಣೀರಿಟ್ಟ ಕ್ರಿಕೆಟಿಗರು

‘ನನ್ನಿಂದ ಬಹುದೊಡ್ಡ ತಪ್ಪಾಗಿದೆ. ನನ್ನ ಬೇಜವಾಬ್ದಾರಿಯಿಂದಾಗಿ ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ತಲೆ ತಗ್ಗಿಸುವಂತಾಗಿದೆ. ಇದಕ್ಕಾಗಿ ಬಹಿರಂಗವಾಗಿ ಕ್ಷಮೆ ಕೋರುತ್ತೇನೆ. ದಯವಿಟ್ಟು ಈ ಘಟನೆಯನ್ನು ಮರೆತುಬಿಡಿ’ ಎಂದು ಆಸ್ಟ್ರೇಲಿಯಾದ ಕ್ರಿಕೆಟಿಗ ಸ್ಟೀವ್‌ ಸ್ಮಿತ್‌ ಕಣ್ಣೀರಿಟ್ಟಿದ್ದಾರೆ.

‘ನನ್ನಿಂದಾದ ತಪ್ಪಿಗೆ ದೊಡ್ಡ ಶಿಕ್ಷೆಯಾಗಿದೆ. ಅದನ್ನು ಅನುಭವಿಸಲು ಸಿದ್ಧನಾಗಿದ್ದೇನೆ. ಈ ಘಟನೆ ನಮ್ಮ ಹಾಗೆ ಇತರೆ ಕ್ರಿಕೆಟಿಗರಿಗೂ ದೊಡ್ಡ ಪಾಠವಾಗಿದೆ. ಇನ್ನು ಮುಂದೆ ಹೀಗಾಗದಂತೆ ಎಚ್ಚರ ವಹಿಸುತ್ತೇನೆ’ ಎಂದು ಸ್ಮಿತ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಹೋದ ವಾರ ನಡೆದಿದ್ದ ದಕ್ಷಿಣ ಆಫ್ರಿಕಾ ಎದುರಿನ ಮೂರನೇ ಟೆಸ್ಟ್‌ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಪ್ರಕರಣದಲ್ಲಿ ಸ್ಮಿತ್‌ ಮತ್ತು ಡೇವಿಡ್‌ ವಾರ್ನರ್‌ ಅವರ ಮೇಲೆ ಅಂತರರಾಷ್ಟ್ರೀಯ ಕ್ರಿಕೆಟ್‌ ಮತ್ತು ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಿಂದ ಒಂದು ವರ್ಷದ ಅವಧಿಗೆ ನಿಷೇಧ ಹೇರಲಾಗಿದೆ. ತಂಡದ ಆಟಗಾರ ಕ್ಯಾಮರಾನ್‌ ಬ್ಯಾಂಕ್ರಾಫ್ಟ್‌ ಅವರಿಗೆ ಒಂಬತ್ತು ತಿಂಗಳು ನಿಷೇಧ ಹೇರಲಾಗಿದೆ. ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ಮತ್ತು ಐಪಿಎಲ್ ಬಗ್ಗೆ ಬಿಸಿಸಿಐ ಬುಧವಾರ ಈ ಮೂವರು ಆಟಗಾರರ ಶಿಕ್ಷೆಯನ್ನು ಪ್ರಕಟಿಸಿತ್ತು.         

short by NP / read more at Prajavani

Comments