Skip to main content


ಬ್ಯಾಡ್ಮಿಂಟನ್‌: ಕ್ವಾರ್ಟರ್‌ಗೆ ಕಶ್ಯಪ್‌

ಭಾರತದ ಪರುಪಳ್ಳಿ ಕಶ್ಯಪ್ ಹಾಗೂ ಸಮೀರ್ ವರ್ಮಾ ಇಲ್ಲಿ ನಡೆಯುತ್ತಿರುವ ಒರ್ಲೀನ್ಸ್‌ ಓಪನ್‌ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಶುಕ್ರವಾರ ಕ್ವಾರ್ಟರ್‌ಫೈನಲ್‌ ಪ್ರವೇಶಿಸಿದ್ದಾರೆ.

ಪುರುಷರ ಸಿಂಗಲ್ಸ್‌ ವಿಭಾಗದ ಪ್ರೀ ಕ್ವಾರ್ಟರ್‌ಫೈನಲ್‌ ಹಣಾಹಣಿಯಲ್ಲಿ ಐದನೇ ಶ್ರೇಯಾಂಕದ ಕಶ್ಯಪ್‌ 21–11, 21–14ರಲ್ಲಿ ನೇರ ಗೇಮ್‌ಗಳಿಂದ ಐರ್ಲೆಂಡ್‌ನ ಜೋಷುವಾ ಮಾಗಿ ಅವರನ್ನು ಮಣಿಸಿದರು.

ಫೆಬ್ರುವರಿಯಲ್ಲಿ ಕಶ್ಯಪ್‌ ಆಸ್ಟ್ರಿಯಾ ಓಪನ್‌ನಲ್ಲಿ ಪ್ರಶಸ್ತಿ ಗೆದ್ದುಕೊಂಡಿದ್ದರು. ಈ ಋತುವಿನಲ್ಲಿ ಅವರ ಎರಡನೇ ಪ್ರಶಸ್ತಿ ಇದಾಗಿದೆ. ಕಾಮನ್‌ವೆಲ್ತ್ ಕೂಟದಲ್ಲಿ ಚಿನ್ನ ಗೆದ್ದುಕೊಂಡಿರುವ ಕಶ್ಯಪ್‌ ಮುಂದಿನ ಪಂದ್ಯದಲ್ಲಿ ಡೆನ್ಮಾರ್ಕ್‌ನ ಮೂರನೇ ಶ್ರೇಯಾಂಕದ ಆಟಗಾರ ರಸ್ಮಸ್‌ ಗೆಮ್ಕೆ ಎದುರು ಪೈಪೋಟಿ ನಡೆಸಲಿದ್ದಾರೆ.            

Short by: Prajwal / read more at Prajavani

Comments