Skip to main content


ಮಡಿಕೇರಿ: ಮತದಾರರ ಪಟ್ಟಿಯಲ್ಲಿ ವಿಕಲಚೇತನರ ಹೆಸರು

ಹದಿನೆಂಟು ವರ್ಷ ಪೂರ್ಣಗೊಂಡಿರುವ ವಿಕಲಚೇತನರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆ ಮಾಡಲು ಇನ್ನೂ ಅವಕಾಶವಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡದಿರುವ ವಿಕಲಚೇತನರು ಹತ್ತಿರ ಬಿಎಲ್‍ಒ ಅಥವಾ ತಹಶೀಲ್ದಾರರ ಕಚೇರಿಗೆ ತೆರಳಿ ಮತದಾರರ ಪಟ್ಟಿಗೆ ಹೆಸರು ನೋಂದಾಯಿಸುಂತೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಧಾನಸಭಾ ಚುನಾವಣೆ ಸಂಬಂಧಿಸಿದಂತೆ ಮತಗಟ್ಟೆಗಳ ಸುಸ್ಥಿತಿ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾಹಿತಿ ಪಡೆದು ಅವರು ಮಾತನಾಡಿದರು.      

short by: NP / read more at Varthabarati.in