Skip to main content


ಭಾರತದ ಮುಡಿಗೆ ನಿದಾಸ್ ಕಪ್ ಗರಿ

ತ್ರಿಕೋನ ಟ್ವೆಂಟಿ–20 ಕ್ರಿಕೆಟ್ ಸರಣಿಯ  ಫೈನಲ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸುವ ಮೂಲಕ ಭಾರತ ನಿದಾಸ್ ಕಪ್ ಅನ್ನು ಮುಡಿಗೇರಿಸಿಕೊಂಡಿದೆ. ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಅಂತಿಮ ಹಣಾಹಣಿಯಲ್ಲಿ ಭಾರತ ತಂಡ ಗೆಲುವು ದಾಖಲಿಸಿತು.  ಬಾಂಗ್ಲಾದೇಶ 166 ರನ್ ಕಲೆ ಹಾಕಿತ್ತು. ಭಾರತದ ಪರವಾಗಿ ರೋಹಿತ್ ಶರ್ಮಾ 56, ಪಾಂಡೇ 28 ರನ್ ಗಳಿಸಿದರು. ಮಿಂಚಿನ ಆಟವಾಡಿದ ದಿನೇಶ್ ಕಾರ್ತಿಕ್ 29 ರನ್ ಗಳಿಸಿ ಪಂದ್ಯವನ್ನು ಗೆಲ್ಲಿಸಿ ಕೊಟ್ಟರು. ಬಾಂಗ್ಲಾ ಪರವಾಗಿ ಶಬ್ಬಿರ್ ರೆಹಮಾನ 77,  ಶಕೀಬ್ ಅಲ್ ಹಸನ್ 7, ಮುಷ್ಫಿಕುರ್ ರಹೀಮ್ 09,  ಮಹಮ್ಮದುಲ್ಲಾ 21, ತಮೀಮ್ ಇಕ್ಬಾಲ್ 15  ರನ್ ಕಲೆ ಹಾಕಿದ್ದರು.
           
Short by: Prajwal / read more at Prajavani