Skip to main content


ನರೇಂದ್ರ ಮೋದಿ ದೇಶದ ನಂ.1 ಕಳ್ಳ: ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ

‘ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಅಭಿವೃದ್ಧಿ ಪಡಿಸಲು ಬಂದಿಲ್ಲ. ಬದಲಿಗೆ, ದೇಶದ ಸಂಪತ್ತನ್ನು ಅಂಬಾನಿ, ಅದಾನಿಗೆ ಒತ್ತೆ ಇಡಲು ಬಂದಿರುವ ದೇಶದ ನಂಬರ್ ಒನ್ ಕಳ್ಳ’ ಎಂದು ಗುಜರಾತ್ ಶಾಸಕ ಹಾಗೂ ಹೋರಾಟಗಾರ ಜಿಗ್ನೇಶ್ ಮೇವಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರವಿವಾರ ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಆಯೋಜಿಸಿದ್ದ ಸಂವಿಧಾನವನ್ನು ಉಳಿಸಲು ಸಂಕಲ್ಪ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೈತರ-ಕಾರ್ಮಿಕರ ಅಭಿವೃದ್ಧಿಗೆ ಏನೂ ಕ್ರಮ ಕೈಗೊಳ್ಳದ ಪ್ರಧಾನಿ ನರೇಂದ್ರ ಮೋದಿ ದೇಶದ ಲಕ್ಷಾಂತರ ಭೂಮಿಯನ್ನು ಅದಾನಿ, ಅಂಬಾನಿಗೆ ಒತ್ತೆ ಇಟ್ಟಿದ್ದಾರೆ ಎಂದು ಕಿಡಿಕಾರಿದರು. ಬಸವಣ್ಣ, ನಾರಾಯಣಗುರು, ಪೆರಿಯಾರ್ ಚಿಂತನೆಗಳನ್ನು ಹೊಂದಿರುವ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಎಂದಿಗೂ ಅವಕಾಶ ಮಾಡಿಕೊಡಬಾರದು. ಪ್ರಧಾನಿ ನರೇಂದ್ರ ಮೋದಿ ಮಾಡೆಲ್ ಮುಗಿದಿದೆ. ಹೀಗಾಗಿ ಹಣ ಹಂಚಿಕೆ ಮಾಡಿ, ಕೋಮು ದಳ್ಳುರಿ ಸೃಷ್ಟಿಸಿ ಚುನಾವಣೆ ಗೆಲ್ಲುವ ಷಡ್ಯಂತ್ರಗಳನ್ನು ಬಿಜೆಪಿ ರೂಪಿಸಿದೆ. ರಾಜ್ಯದ ಜನತೆ ಅದಕ್ಕೆ ಅವಕಾಶ ಮಾಡಬಾರದು ಎಂದು ಅವರು ಮನವಿ ಮಾಡಿದರು.        

short by Pawan / more at Varthabharathi

Comments