Skip to main content


ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 100 ಕೆ.ಜಿ ಚಿನ್ನಾಭರಣ ವಶ- 34 ಮಂದಿ ಆರೋಪಿಗಳ ಬಂಧನ

ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೆಂಗಳೂರಿನ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 34 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. 2017-18 ಸಾಲಿನಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಿಸಲೆತ್ನಿಸಿದ 100 ಕೆ.ಜಿ. ಚಿನ್ನಾಭರಣಗಳನ್ನ ವಶಕ್ಕೆ ಪಡೆದಿದ್ದಾರೆ. ಇದರ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬರೋಬ್ಬರಿ 30 ಕೋಟಿಗೂ ರೂ. ಅಧಿಕವಾಗಿದೆ. ಅಕ್ರಮವಾಗಿ ಸ್ಮಗ್ಲಿಂಗ್ ನಲ್ಲಿ ಭಾಗಿಯಾಗಿರುವ 34 ಜನ ಆರೋಪಿಗಳನ್ನ ಅಧಿಕಾರಿಗಳು ಬಂಧಿಸಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.        

short by NP / read more at Public TV