Skip to main content


ಮೇ 11 ಮತ್ತು 12 ರಂದು ಶಾಲಾ-ಕಾಲೇಜುಗಳಿಗೆ ರಜೆ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಮೇ 11 ಮತ್ತು 12 ರಂದು ರಜೆ ನೀಡಲಾಗಿದೆ. ಮೇ 12 ರಂದು ವಿಧಾನಸಭೆ ಚುನಾವಣೆಗೆ ಮತದಾನ ನಡೆಯುವ ಹಿನ್ನೆಲೆಯಲ್ಲಿ ಎರಡು ದಿನ ರಜೆ ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೇ 11 ರಂದೇ ಮತಗಟ್ಟೆಗಳಿಗೆ ಚುನಾವಣಾ ಸಿಬ್ಬಂದಿ ಆಗಮಿಸುವ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ. ಶಾಲಾ ಶಿಕ್ಷಕರು ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಮತದಾನದ ದಿನದಂದು ಚುನಾವಣಾ ಕಾರ್ಯದಲ್ಲಿ ನಿರತರಾಗಲಿದ್ದಾರೆ. ಅಲ್ಲದೆ, ಬಹುತೇಕ ಎಲ್ಲಾ ಶಾಲಾ-ಕಾಲೇಜುಗಳೇ ಮತಗಟ್ಟೆಗಳಾಗಿರುವುದರಿಂದ ಎರಡೂ ದಿನ ರಜೆ ನೀಡಲಾಗಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.        

short by Pawan / more at Eesanje

Comments