Skip to main content


ಕಾವೇರಿ ವಿವಾದ ಸಲುವಾಗಿ ನಡೆಯಲಿದೆ ಕರ್ನಾಟಕ ಬಂದ್! ಆದ್ರೆ ಯಾವಾಗ?

ಕಾವೇರಿ ನಿರ್ವಹಣಾ ಮಂಡಳಿಯನ್ನು ರಚನೆ ಮಾಡಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಏಪ್ರಿಲ್ 12ರ (ಗುರುವಾರ) ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.ಕಾವೇರಿ ನಿರ್ವಹಣಾ ಮಂಡಳಿ ರಚನೆ ಬೇಡ ಎಂದು ಹೊಸೂರು ರಸ್ತೆಯ ಅತ್ತಿಬೆಲೆ ಬಳಿ ಗುರುವಾರ ವಾಟಾಳ್ ನಾಗರಾಜ್ ಸೇರಿದಂತೆ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, 'ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬಾರದು ಎಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ' ಎಂದರು.'ಇನ್ನು ಮುಂದೆ ಕರ್ನಾಟಕದಲ್ಲಿ ರಜನಿಕಾಂತ್ ಮತ್ತು ಕಮಲ್ ಹಾಸನ್ ಚಿತ್ರಗಳನ್ನು ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

short by Nithin / read more at OneIndia Kannada

Comments