Skip to main content


ಬೆಂಗಳೂರಲ್ಲಿ ದಾಖಲೆ ಇಲ್ಲದ 1.5 ಕೋಟಿ ರೂ. ವಶ

ಚುನಾವಣೆ ನೀತಿ ಸಂಹಿತೆ ಜಾರಿಯಾಗಿರುವ ಈ ಸಂದರ್ಭದಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.5 ಕೋಟಿ ರೂಪಾಯಿ ಹಣವನ್ನು ಬೆಂಗಳೂರು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಾರುತಿ ಬಲೆನೊ ಕಾರಿನಲ್ಲಿ ರಾಯಚೂರಿನ ಸುಭಾಷ್‌ ಎನ್ನುವವರು ಹಣ ಕೊಂಡೊಯ್ಯುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಪೊಲೀಸರು 1.5 ಕೋಟಿ ರೂಪಾಯಿ ವಶಪಡಿಸಿಕೊಂಡರು. ಈ ಹಣಕ್ಕೆ ಸುಭಾಷ್‌ ಅವರ ಬಳಿ ಯಾವುದೇ ದಾಖಲೆಗಳು ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಎಸ್‌.ಜೆ. ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ವಿಚಾರಣೆ ನಡೆಸಲಾಯಿತು.    
      
short by NP / read more at Vijaya Karnataka