Skip to main content


ಇನ್ಟಾಗ್ರಾಮ್ ನಲ್ಲಿ "ಹೆಬ್ಬುಲಿ" ಆರ್ಭಟ : 2 ಮಿಲಿಯನ್ ಫಾಲೋವರ್ಸ್ ಪಡೆದ ಕಿಚ್ಚ

ಕನ್ನಡದ ನಟರ ಪೈಕಿ ಸಾಮಾಜಿಕ ಜಾಲತಾಣವನ್ನು ಹೆಚ್ಚು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿರುವ ನಟ ಕಿಚ್ಚ ಸುದೀಪ್. ಸುದೀಪ್ ಸೋಷಿಯಲ್ ಮೀಡಿಯಾದ ಮೂಲಕ ತಮ್ಮ ಅಭಿಮಾನಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿ ಇರುತ್ತಾರೆ. ಸದ್ಯ ಇನ್ಟಾಗ್ರಾಮ್ ನಲ್ಲಿ ಹೆಬ್ಬುಲಿ ಸುದೀಪ್ ಆರ್ಭಟ ಜೋರಾಗಿದೆ. ಕಿಚ್ಚ ಸುದೀಪ್ ಈಗ ಇನ್ಟಾಗ್ರಾಮ್ ನಲ್ಲಿ 2 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಇನ್ಟಾಗ್ರಾಮ್ ನಲ್ಲಿ 2 ಮಿಲಿಯನ್ ಗಡಿ ದಾಟಿದ ಮೊದಲ ಕನ್ನಡದ ನಟ ಸುದೀಪ್ ಆಗಿದ್ದಾರೆ. ಕೆಲವೇ ತಿಂಗಳುಗಳ ಹಿಂದೆ ಇನ್ಟಾಗ್ರಾಮ್ ಖಾತೆ ತೆರೆದಿದ್ದ ಸುದೀಪ್ ಕಡಿಮೆ ಸಮಯದಲ್ಲಿಯೇ ಇಷ್ಟೊಂದು ಹಿಂಬಾಲಕರನ್ನು ಹೊಂದಿದ್ದಾರೆ.        

short by Pawan / read more at Filmibeat