Skip to main content


2019ರ ವಿಶ್ವಕಪ್ ಬಳಿಕ ಕ್ರಿಕೆಟ್‌ನಿಂದ ನಿವೃತ್ತಿ: ಯುವರಾಜ್‌ಸಿಂಗ್

ಆಲ್‌ರೌಂಡರ್ ಯುವರಾಜ್ ಸಿಂಗ್ 2017 ಜೂನ್‌ನಲ್ಲಿ ಭಾರತದ ಪರ ಏಕದಿನ ಅಂತರ್‌ರಾಷ್ಟ್ರೀಯ ಕ್ರಿಕೆಟ್ ಪಂದ್ಯ ಆಡಿದ್ದರು. ಆನಂತರ ತಂಡದಿಂದ ದೂರವಾಗಿರುವ ಯುವಿ ಮತ್ತೆ ತಂಡಕ್ಕೆ ಮರಳಿ ಬರುವ ಕನಸು ಕಾಣುತ್ತಿದ್ದಾರೆ. ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ 2019ರಲ್ಲಿ ನಡೆಯಲಿರುವ ವಿಶ್ವಕಪ್ ಬಳಿಕ ಅಂತರ್‌ರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಎರಡು ದಶಕಗಳಿಂದ ದೇಶಕ್ಕಾಗಿ ಆಡುತ್ತಿದ್ದೇನೆ. ಎಂದಾದರೂ ನಿವೃತ್ತಿ ಅನಿವಾರ್ಯ. ವಿಶ್ವಕಪ್ ಬಳಿಕ ನಿವೃತ್ತಿಯಾಗುವುದಾಗಿ 36ರ ಹರೆಯದ ಯುವರಾಜ್ ಸಿಂಗ್ ಹೇಳಿದ್ದಾರೆ. ಯುವರಾಜ್ ಸಿಂಗ್ ಇದೀಗ ಐಪಿಎಲ್ ಟ್ವೆಂಟಿ-20 ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ತಂಡದಲ್ಲಿ ಆಡುತ್ತಿದ್ದಾರೆ.              

short by Prajwal

Comments