Skip to main content


2019 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಳ ವೇಳಾಪಟ್ಟಿ ಪ್ರಕಟ

ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ನಡೆಯಲಿರುವ 2019ರ ಏಕದಿನ ವಿಶ್ವಕಪ್ ಕ್ರಿಕೆಟ್‌ನ ವೇಳಾಪಟ್ಟಿ ಗುರುವಾರ ಪ್ರಕಟಗೊಂಡಿದೆ. 2019 ಮೇ 30ರಿಂದ ಜುಲೈ 14ರ ತನಕ ನಡೆಯಲಿರುವ ಟೂರ್ನಮೆಂಟ್‌ನ ಲ್ಲಿ ಭಾರತ ಜೂ.5ರಂದು ಸೌತ್‌ಹ್ಯಾಂಪ್ಟನ್‌ನಲ್ಲಿ ತನ್ನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕ ತಂಡವನ್ನು ಎದುರಿಸಲಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಜೂ.16ರಂದು ಮ್ಯಾಂಚೆಸ್ಟರ್‌ನಲ್ಲಿ ಭಾರತ ಎದುರಿಸಲಿದೆ. 46 ದಿನಗಳ ನಡೆಯಲಿರುವ ಟೂರ್ನಿಯಲ್ಲಿ ಗ್ರೂಪ್ ಹಂತದಲ್ಲಿ 45 ಪಂದ್ಯಗಳು ನಿಗದಿಯಾಗಿದೆ. ಜೂ.30ರಂದು ಓವಲ್‌ನಲ್ಲಿ ಆತಿಥೇಯ ಇಂಗ್ಲೆಂಡ್‌ನ್ನು ದಕ್ಷಿಣ ಆಫ್ರಿಕ ಎದುರಿಸಲಿದೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯ ತಂಡ ಮೇ 30ರಂದು ಅಫ್ಘಾನಿಸ್ತಾನ ವಿರುದ್ಧ ಅಭಿಯಾನ ಆರಂಭಿಸಲಿದೆ.

short by Prajwal / more at Newspoint

Comments