Skip to main content


ಕಂದಕಕ್ಕೆ ಉರುಳಿದ ಶಾಲಾ ಬಸ್ – 24 ಮಕ್ಕಳ ದಾರುಣ ಸಾವು

ಶಾಲಾ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 24 ಶಾಲಾ ಮಕ್ಕಳು ಸೇರಿ 27 ಮಂದಿ ಮೃತಪಟ್ಟಿರುವ ದಾರುಣ ಘಟನೆ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ನಡೆದಿದೆ. ಶಾಲೆ ಮುಗಿದ ಬಳಿಕ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೃತ ಪಟ್ಟ ಮಕ್ಕಳಲ್ಲಿ ಹೆಚ್ಚಿನವರು ಸ್ಥಳೀಯ ರಾಮ್ ಸಿಂಗ್ ಪಥಾನಿ ಮೆಮೋರಿಯಲ್ ಪಬ್ಲಿಕ್ ಶಾಲೆಯ 5ನೇ ತರಗತಿಗಿಂತ ಕೆಳಗಿನ ತರಗತಿಯವರು ಎಂದು ತಿಳಿದು ಬಂದಿದೆ. ಶಾಲಾ ಬಸ್‍ನಲ್ಲಿ 40ಕ್ಕೂ ಹೆಚ್ಚು ಮಕ್ಕಳು ಇದ್ದರು ಎಂದು ಶಾಲಾಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ಪ್ರಧಾನಿ ಮೋದಿ, ಹಿಮಾಚಲ ಸಿಎಂ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ.    

short by NP / read more at Public TV

Comments