Skip to main content


₹2.55 ಕೋಟಿ ಮೌಲ್ಯದ ಚಿನ್ನಾಭರಣ ವಶ

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ, ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ ₹2.55 ಕೋಟಿ ಮೌಲ್ಯದ 7 ಕೆ.ಜಿ. 722 ಗ್ರಾಂ ತೂಕದ ಚಿನ್ನಾಭರಣಗಳನ್ನು ಹಾಗೂ 22 ಕೆ.ಜಿ. 400 ಗ್ರಾಂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಗೋವಾದಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ ಚಿನ್ನಾಭರಣಗಳನ್ನು, ಧಾರವಾಡ ಜಿಲ್ಲೆ ಕಡಬಗಟ್ಟಿ ಕ್ರಾಸ್‌ ಬಳಿ ಇರುವ ಚೆಕ್‌ಪೋಸ್ಟ್‌ನಲ್ಲಿ ಭಾನುವಾರ ತಡರಾತ್ರಿ ವಶಪಡಿಸಿಕೊಳ್ಳಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಮದಬಾವಿ ಚೆಕ್‌ಪೋಸ್ಟ್‌ ಬಳಿ, ಕಾರಿನಲ್ಲಿ ಸಾಗಿಸುತ್ತಿದ್ದ ಬೆಳ್ಳಿ ಆಭರಣಗಳನ್ನು ಚುನಾವಣಾ ಸಿಬ್ಬಂದಿ ಸೋಮವಾರ ವಶಪಡಿಸಿಕೊಂಡಿದ್ದಾರೆ.‌               

short by NP / read more at Prajavani

Comments