Skip to main content


‘ಕ್ರೈಸ್‌’ ಟೆಂಡರ್‌: ₹2,553 ಕೋಟಿ ಅಕ್ರಮ?

ವಿಧಾನಸಭಾ ಚುನಾವಣೆ ಸನಿಹದಲ್ಲಿರುವಾಗ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು (ಕ್ರೈಸ್‌) ₹ 2,553 ಕೋಟಿ ಮೊತ್ತದ 323 ಕಾಮಗಾರಿಗಳಿಗೆ ತರಾತುರಿಯಲ್ಲಿ ನಡೆಸಿರುವ ಟೆಂಡರ್ ಪ್ರಕ್ರಿಯೆಗಳಲ್ಲಿ ಭಾರಿ ಅಕ್ರಮ ನಡೆದಿದೆ ಎಂಬ ಆರೋಪ‍ ಬಂದಿದೆ. ‘ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ‘ಕ್ರೈಸ್‌’, ವಸತಿ ಶಾಲೆಗಳು ಹಾಗೂ ಕಾಲೇಜು ಸಂಕೀರ್ಣಗಳ ಕಾಮಗಾರಿಗಳ ಗುತ್ತಿಗೆ ನೀಡುವಾಗ ಕರ್ನಾಟಕ ಸಾರ್ವಜನಿಕ ಖರೀದಿಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ )ಕಾಯ್ದೆ ಉಲ್ಲಂಘಿಸಿದೆ. ಈ ಎಲ್ಲ ಟೆಂಡರ್‌ಗಳನ್ನು ರದ್ದುಪಡಿಸಬೇಕು’ ಎಂದು ಕೆ.ಟಿ. ಚಂದ್ರಶೇಖರ್ ಎಂಬ ಗುತ್ತಿಗೆದಾರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾಗೆ ನೀಡಿದ ದೂರಿನಲ್ಲಿ ಆಗ್ರಹಿಸಿದ್ದಾರೆ.          

short by NP / read more at Prajavani