Skip to main content


ಬಿಜೆಪಿಯಿಂದ 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ 

ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಮತದಾರರನ ಮನಗೆಲ್ಲುವುದಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಸ್ಟಾರ್‍ ಪ್ರಚಾರಕರ ಮೊರೆ ಹೋಗುವುದು ಮಾಮೂಲಿ ಈ ನಡುವೆ ಒಟ್ಟು 40 ಮಂದಿ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಂದ ಹಾಗೇ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೊದಲ ಸ್ಥಾನ ಪಡೆದಿದ್ದರೆ, ನಂತರದ ಸ್ಥಾನ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್‍ಕುಮಾರ್, ಡಿ.ವಿ.ಸದಾನಂದಗೌಡ ಪಡೆದಿದ್ದಾರೆ. ಮೊದಲ 10 ಸ್ಥಾನದಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‍ಗೂ ಸಹ ಸ್ಥಾನ ಕಲ್ಪಿಸಲಾಗಿದೆ.        

short by NP / more at Kannada News Now

Comments