Skip to main content


87 ಚುನಾವಣಾಧಿಕಾರಿಗಳೇ ಫೇಲ್!

ಮತದಾನ, ಮತ ಎಣಿಕೆ ಪ್ರಕ್ರಿಯೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಹುದ್ದೆಗಳಿಗೆ ನಿಯೋಜಿಸಿರುವ ಅಧಿಕಾರಿಗಳ ಪೈಕಿ ಅನೇಕರು ಚುನಾವಣಾ ಕರ್ತವ್ಯ ನಿರ್ವಹಣೆಗೆ ಸಂಬಂಧಿಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಲ್ಲ. ಅಚ್ಚರಿ ಎಂದರೆ, ಅನುತ್ತೀರ್ಣಗೊಂಡವರಲ್ಲಿ ಕೆಎಎಸ್‌ ಶ್ರೇಣಿಯ ಅಧಿಕಾರಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸುವ ಮುನ್ನ ಚುನಾವಣಾ ಆಯೋಗವು ಅವರಿಗೆ ವಿಶೇಷ ತರಬೇತಿ ನೀಡಿ, ಬಳಿಕ ಪರೀಕ್ಷೆ ನಡೆಸುತ್ತದೆ. ಚುನಾವಣಾಧಿಕಾರಿಗಳಾಗಿ ನೇಮಕಗೊಂಡಿರುವ 224 ಅಧಿಕಾರಿಗಳ ಪೈಕಿ 87 ಮಂದಿ ಅನುತ್ತೀರ್ಣರಾಗಿದ್ದರು. ಸಹಾಯಕ ಚುನಾವಣಾಧಿಕಾರಿಗಳಾಗಿ ನಿಯೋಜನೆಗೊಂಡಿರುವ 300 ಅಧಿಕಾರಿಗಳ ಪೈಕಿ 223 ಮಂದಿ ಮೊದಲ ಪ್ರಯತ್ನದಲ್ಲಿ ತೇರ್ಗಡೆಯಾಗಿಲ್ಲ.      

short by NP / read more at Prajavani

Comments