Skip to main content


ಎಸ್‌ಸಿ,ಎಸ್‌ಟಿ ಕಾಯ್ದೆ ‘ಸುಪ್ರೀಂ’ ಆದೇಶ ಖಂಡಿಸಿ ಬಂದ್‌: 9 ಸಾವು, ಹಲವರಿಗೆ ಗಾಯ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ಎಸ್‌ಟಿ, ಎಸ್‌ಟಿ) ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ ಎಂದು ಆರೋಪಿಸಿ ದಲಿತ ಸಂಘಟನೆಗಳು ಕರೆ ನೀಡಿದ್ದ ‘ಭಾರತ ಬಂದ್‌’ ಹಿಂಸಾಚಾರಕ್ಕೆ ತಿರುಗಿದೆ. ಹಿಂಸೆಗೆ ಒಟ್ಟು 9 ಮಂದಿ ಬಲಿಯಾಗಿದ್ದಾರೆ. ಮಧ್ಯಪ್ರದೇಶದಲ್ಲಿ ಆರು, ರಾಜಸ್ಥಾನದಲ್ಲಿ ಒಬ್ಬರು ಮತ್ತು ಉತ್ತರ ಪ್ರದೇಶದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಹಲವು ಮಂದಿಗಾಯಗೊಂಡಿದ್ದಾರೆ.ಎಸ್‌ಸಿ, ಎಸ್‌ಟಿ ಸಮುದಾಯದ ಜನರ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ದೂರು ಸಲ್ಲಿಕೆಯಾದ ಕೂಡಲೇ ಎಫ್‌ಐಆರ್‌ ದಾಖಲಿಸಬಾರದು ಮತ್ತು ಆರೋಪಿಗಳನ್ನು ಬಂಧಿಸಬಾರದು ಎಂದು ಸುಪ್ರೀಂ ಕೋರ್ಟ್‌ ಇತ್ತೀಚೆಗೆ ತೀರ್ಪು ನೀಡಿತ್ತು. ಇದನ್ನು ಖಂಡಿಸಿ ಬಂದ್‌ ಕರೆ ನೀಡಲಾಗಿತ್ತು.     

short by NP / read more at Prajavani

Comments