Skip to main content


ಫೈನಲ್‌ ಪ್ರವೇಶಿಸಿದ ನಡಾಲ್‌

ಮಿಂಚಿನ ಆಟ ಆಡಿದ ಸ್ಪೇನ್‌ನ ರಫೆಲ್‌ ನಡಾಲ್‌, ಎಟಿಪಿ ಮಾಂಟೆ ಕಾರ್ಲೊ ಮಾಸ್ಟರ್ಸ್‌ ಟೆನಿಸ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿದ್ದಾರೆ. ಶನಿವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ ಸೆಮಿಫೈನಲ್‌ ಹಣಾಹಣಿಯಲ್ಲಿ ನಡಾಲ್‌ 6–4, 6–1ರ ನೇರ ಸೆಟ್‌ಗಳಿಂದ ಬಲ್ಗೇರಿಯಾದ ಗ್ರಿಗರ್‌ ದಿಮಿಟ್ರೊವ್‌ ವಿರುದ್ಧ ಗೆದ್ದರು. ಇದರೊಂದಿಗೆ ಟೂರ್ನಿಯಲ್ಲಿ 11ನೇ ಬಾರಿ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟ ಸಾಧನೆ ಮಾಡಿದರು. ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ನಡಾಲ್‌, ಆರಂಭದಿಂದಲೇ ಆಕ್ರಮಣಕಾರಿ ಆಟ ಆಡಿದರು. ಮೊದಲ ಗೇಮ್‌ನಲ್ಲಿ ಸರ್ವ್‌ ಕಾಪಾಡಿಕೊಂಡ ಅವರು ಎರಡನೇ ಗೇಮ್‌ನಲ್ಲಿ ಎದುರಾಳಿಯ ಸರ್ವ್‌ ಮುರಿದರು.h

short by Prajwal / more at Prajavani

Comments