Skip to main content


ಇಂದಿನಿಂದ ಕ್ರಿಕೆಟ್ ಹಬ್ಬ ಐಪಿಎಲ್ ಶುರು..

ಪ್ರಸಕ್ತ ಸಾಲಿನ 11ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿ ಇಂದಿನಿಂದ ಶುರುವಾಗಲಿದ್ದು, ಇಂದು ರಾತ್ರಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅದ್ಧೂರಿ ಉದ್ಘಾಟನಾ ಸಮಾರಂಭ ನಡೆಯಲಿದೆ.ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಮಾಜಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಒಟ್ಟು 51 ದಿನಗಳ ಕಾಲ ಟೂರ್ನಿ ನಡೆಯಲಿದೆ. ಇಂದಿನ ಪಂದ್ಯಕ್ಕೂ ಮುಂಚಿತವಾಗಿ ವರ್ಣ ರಂಜಿತ ನ್ರತ್ಯ ಕಾರ್ಯಕ್ರಮಗಳು ನಡೆಯಲಿದ್ದು ಬಾಲಿವುಡ್ ನ ನಟ, ನಟಿಯರು ಹೆಜ್ಜೆ ಹಾಕಲಿದ್ದಾರೆ.

Short by : Nithin