Skip to main content


ಅನಂತ್ ಕುಮಾರ್ ಹೆಗಡೆ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿದ ಜೈನರು

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಟೀಕಿಸುವ ಭರದಲ್ಲಿ ಪರೋಕ್ಷವಾಗಿ ಶ್ರವಣಬೆಳಗೊಳವನ್ನು ಅಪಹಾಸ್ಯ ಮಾಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಜೈನ ಸಮುದಾಯದವರು ಆಕ್ರೋಶವನ್ನು ಹೊರ ಹಾಕಿದ್ದಾರೆ. ಕಿತ್ತೂರು ಬಳಿಯ ತಿಗಡೊಳಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದ ಜೈನ ಸಮುದಾಯದ ಮಂದಿ ಅನಂತ್ ಕುಮಾರ್ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವರು ಜೈನರ ಧಾರ್ಮಿಕ ಭಾವನೆಗಳಿಗೆ ನೋವನ್ನುಂಟು ಮಾಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಇದೇ ಸಂದರ್ಭ ಕಿತ್ತೂರು ತಹಶೀಲಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು.    

short by Pawan / more at Varthabharathi

Comments