Skip to main content


ಚಿನ್ನಸ್ವಾಮಿ ಸ್ಟೇಡಿಯಂಗೆ ಐಪಿಎಲ್ ಮ್ಯಾಚ್ ನೋಡಲು ಹೋಗುವ ಮುನ್ನ ಎಚ್ಚರ!

ಐಪಿಎಲ್ ಪ್ರಿಯರಿಗೆ ಬೆಂಗಳೂರಿನಲ್ಲಿ ಬೈಕ್ ಕಳ್ಳರ ಕಾಟ ಶುರುವಾಗಿದ್ದು, ಚಿನ್ನಸ್ವಾಮಿ ಸ್ಟೇಡಿಯಂಗೆ ಮ್ಯಾಚ್ ನೋಡಲು ಬಂದ ಪ್ರೇಕ್ಷಕರ 15 ಬೈಕ್‍ಗಳನ್ನು ಕಳ್ಳರು ಕದ್ದು ಎಸ್ಕೇಪ್ ಆಗಿರೋ ಘಟನೆ ಕಬ್ಬನ್ ಪಾರ್ಕ್ ನಲ್ಲಿ ನಡೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಳೆದ 3 ಪಂದ್ಯಗಳ ವೇಳೆ ಈ ಘಟನೆ ನಡೆದಿದ್ದು, ಅಭಿಮಾನಿಗಳು ಕಬ್ಬನ್ ಪಾರ್ಕ್ ನಲ್ಲಿ ಬೈಕ್ ಪಾರ್ಕಿಂಗ್ ಮಾಡಿ ಆರ್‌ಸಿಬಿ ಹಾಗೂ ಚೆನ್ನೈ ಮ್ಯಾಚ್ ನೋಡಲು ಹೋಗಿದ್ದರು. ಈ ವೇಳೆ ಬೈಕ್ ಕಳ್ಳರು ಕಬ್ಬನ್ ಪಾರ್ಕ್ ನಲ್ಲಿ ಪಾರ್ಕಿಂಗ್ ಮಾಡಿದ್ದ ಬೈಕ್ ಗಳನ್ನ ಕದ್ದು ಎಸ್ಕೇಪ್ ಆಗಿದ್ದಾರೆ. ಕಳೆದ 3 ಪಂದ್ಯಾವಳಿಗಳು ಸೇರಿ ಕಳ್ಳರು ಒಟ್ಟು 15 ಬೈಕ್ ಗಳನ್ನ ಕದ್ದು ಎಸ್ಕೇಪ್ ಆಗಿದ್ದಾರೆ. ಐಪಿಎಲ್ ನ್ನೇ ಬಂಡವಾಳ ಮಾಡಿಕೊಂಡ ಖರ್ತನಾಕ್ ಕಳ್ಳರು ಬೈಕ್ ಗಳನ್ನೇ ಕಳ್ಳತನ ಮಾಡುತ್ತಿದ್ದಾರೆ. ಈ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.           

short by Prajwal / more at PublicTV

Comments