Skip to main content


ಸಂಪೂರ್ಣ ವೇತನ ಫ್ರಾಂಚೈಸಿಗೆ ಬಿಟ್ಟುಕೊಟ್ಟ ಗಂಭೀರ್

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ನಾಯಕತ್ವವನ್ನು ಬಿಟ್ಟುಕೊಟ್ಟಿರುವ ಗೌತಮ್ ಗಂಭೀರ್, ಇದೀಗ ಪ್ರಸಕ್ತ ಸಾಲಿನಲ್ಲಿ ವೇತನ ಪಡೆಯದಿರಲು ನಿರ್ಧರಿಸಿದ್ದಾರೆ. ಐಪಿಎಲ್ 2018ನೇ ಸಾಲಿಗಾಗಿ ನಡೆದ ಹರಾಜಿನಲ್ಲಿ ಬರೋಬ್ಬರಿ 2.8 ಕೋಟಿ ರೂ.ಗಳನ್ನು ನೀಡಿ ಗಂಭೀರ್ ಅವರನ್ನು ಡೆಲ್ಲಿ ಫ್ರಾಂಚೈಸಿ ಖರೀದಿಸಿತ್ತು. ಆದರೆ ತಂಡದ ಕೆಟ್ಟ ಪ್ರದರ್ಶನದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿರುವ ಗಂಭೀರ್, ನಾಯಕತ್ವ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಐಪಿಎಲ್ 2018ನೇ ಆವೃತ್ತಿ ಜಾರಿಯಲ್ಲಿರುವಂತೆಯೇ ಆಡಿರುವ ಆರು ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಗೆಲುವು ದಾಖಲಿಸಿರುವ ಡೆಲ್ಲಿ ಕೇವಲ ಎರಡು ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಮುಂದುವರಿಯುತ್ತಿದೆ.              

short by Prajwal / more at Newspoint

Comments