Skip to main content


ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ – ವಿದ್ಯಾರ್ಥಿಗಳಿಬ್ಬರ ದುರ್ಮರಣ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಲ್ಲೆಯ ಕಾರವಾರ ತಾಲೂಕಿನ ಮಾಜಾಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಚೇತನ್ (21) ಮತ್ತು ಶಿವರಾಜ್(20) ಮೃತ ದುರ್ದೈವಿಗಳು. ಚೇತನ್ ಮೂಲತಃ ಭದ್ರಾವತಿಯ ನಿವಾಸಿಯಾಗಿದ್ದು, ಕಾರವಾರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದನು. ಶಿವರಾಜ್ ಶಿರವಾಡ ಮೂಲದವನಾಗಿದ್ದು, ಸರ್ಕಾರಿ ಕಾಲೇಜಿನಲ್ಲಿ ಬಿ.ಕಾಂ ಪದವಿ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ.     

short by NP / read more at Public TV

Comments