Skip to main content


ಆರ್‌ಸಿಬಿ ತಂಡದಿಂದ ಡ್ರಾಪ್ ಆದ ಸತ್ಯ ಬಿಚ್ಚಿಟ್ಟ ಕ್ರಿಸ್ ಗೇಲ್

ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಆಯ್ಕೆಗಾರರು ಐಪಿಎಲ್ 11 ನೇ ಆವೃತ್ತಿಗೆ ತನ್ನನ್ನು ಉಳಿಸಿಕೊಳ್ಳುವ ಬಗ್ಗೆ ಮೊದಲು ಮಾಹಿತಿ ನೀಡಿದ್ದರು. ಆದ್ರೆ ಬಳಿಕ ಅವರು ತನ್ನನ್ನು ಸಂಪರ್ಕಿಸಲಿಲ್ಲ. ಇದರಿಂದ ತನಗೆ ನಿರಾಸೆ ಅನುಭವ ಉಂಟಾಗಿತ್ತು ಎಂದು ಕಿಂಗ್ಸ್ ಇಲೆವೆನ್ ತಂಡ ಹಾಗೂ ಕೆರೆಬಿಯನ್ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ಹೇಳಿದ್ದಾರೆ.ಈ ಕುರಿತು ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಮೊದಲು ಆರ್‌ಸಿಬಿ ತಂಡದ ಆಯ್ಕೆ ಸಮಿತಿ ತನ್ನನ್ನು ಉಳಿಸಿಕೊಳ್ಳುವುದಾಗಿ ಮಾಹಿತಿ ನೀಡಿತ್ತು. ಆದರೆ ಬಳಿಕ ತಮ್ಮ ನಿರ್ಧಾರವನ್ನು ಬದಲಾಯಿಸಿದರು. ಆದರೆ ಈ ಕುರಿತು ಯಾರನ್ನು ಹೊಣೆ ಮಾಡಲು ಸಾಧ್ಯವಿಲ್ಲ. ತಾನು ಈ ಹಿಂದಿನ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇನೆ. ಇದಕ್ಕೆ ಸಾಕ್ಷಿ ಎಂಬಂತೆ 21 ಶತಕ ಹಾಗೂ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಹೊಂದಿದ್ದೇನೆ ಎಂದರು.
ಐಪಿಎಲ್ ಟೂರ್ನಿಯ ಹರಾಜು ಪ್ರಕ್ರಿಯೆ ವೇಳೆ ತನ್ನನ್ನು ಎರಡು ಬಾರಿಯೂ ಆಯ್ಕೆ ಮಾಡಿರಲಿಲ್ಲ. ಆದರೆ ಮೂರನೇ ಬಾರಿ ಸೆಹ್ವಾಗ್ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುವ ಅವಕಾಶ ನೀಡಿದ್ದರು. ಇದು ತನಗೆ ಅಚ್ಚರಿ ಮೂಡಿಸಿತ್ತು. ಈ ಮೊದಲು ತಾನು ಟೂರ್ನಿಗೆ ಅಗತ್ಯವಿಲ್ಲ `ಇಟ್ಸ್ ಫೈನ್’ ಎಂದು ಸಮಾಧಾನಗೊಂಡಿದ್ದೆ ಎಂದು ಹೇಳಿದರು.    

short by Prajwal / more at PublicTV    

Comments