Skip to main content


ಗೆಲುವಿನ ಹೊಸ್ತಿಲಲ್ಲಿ ದಕ್ಷಿಣ ಆಫ್ರಿಕಾ

ನಾಯಕ ಫಾಫ್‌ ಡು ಪ್ಲೆಸಿ (120; 178ಎ, 18ಬೌಂ, 2ಸಿ) ಅವರ ಆಕರ್ಷಕ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾ ಎದುರಿನ ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಗೆಲುವಿನತ್ತ ದಾಪುಗಾಲಿಟ್ಟಿದೆ.    ನ್ಯೂ ವಾಂಡರರ್ಸ್‌ ಕ್ರೀಡಾಂಗಣ ದಲ್ಲಿ ನಡೆಯುತ್ತಿರುವ ಪಂದ್ಯದ ದ್ವಿತೀಯ ಇನಿಂಗ್ಸ್‌ನಲ್ಲಿ ಹರಿಣಗಳ ನಾಡಿನ ತಂಡ 105 ಓವರ್‌ಗಳಲ್ಲಿ 6 ವಿಕೆಟ್‌ಗೆ 344ರನ್ ಕಲೆಹಾಕಿ ಡಿಕ್ಲೇರ್‌ ಮಾಡಿಕೊಂಡಿತು. ಗೆಲುವಿಗೆ 612ರನ್‌ಗಳ ಕಠಿಣ ಗುರಿ ಬೆನ್ನಟ್ಟಿರುವ ಆಸ್ಟ್ರೇಲಿಯಾ ತಂಡ ದಿನದಾಟದ ಅಂತ್ಯಕ್ಕೆ ಎರಡನೇ ಇನಿಂಗ್ಸ್‌ನಲ್ಲಿ 30 ಓವರ್‌ಗಳಲ್ಲಿ 3 ವಿಕೆಟ್‌ಗೆ 88ರನ್‌ ಪೇರಿಸಿದೆ.         

Short by Prajwal / read more at Prajavani

Comments