Skip to main content


ಚೆನ್ನೈಗೆ ಸೇಡು ತೀರಿಸಲು ಮುಂಬೈ ತವಕ

ಐಪಿಎಲ್ ಟ್ವೆಂಟಿ-20 ಟೂರ್ನಮೆಂಟ್‌ನಲ್ಲಿ ಸೋಲಿನ ಸರಮಾಲೆ ಎದುರಿಸುತ್ತಿರುವ ಮುಂಬೈ ಇಂಡಿಯನ್ಸ್ ತಂಡ ಶನಿವಾರ ನಡೆಯಲಿರುವ ಐಪಿಎಲ್‌ನ 27ನೇ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಚೆನ್ನೈಗೆ ಸೇಡು ತೀರಿಸಲು ಮುಂಬೈ ನೋಡುತ್ತಿದೆ. ಮುಂಬೈ ವಿರುದ್ಧ ಚೆನ್ನೈ ತಂಡ ಮೊದಲ ಪಂದ್ಯದಲ್ಲಿ ಗೆಲುವಿನೊಂದಿಗೆ ಈ ಆವೃತ್ತಿಯಲ್ಲಿ ಅಭಿಯಾನ ಆರಂಭಿಸಿತ್ತು. ಮುಂಬೈ 1 ವಿಕೆಟ್ ಅಂತರದಲ್ಲಿ ಸೋಲು ಅನುಭವಿಸಿತ್ತು. ಈ ಆಘಾತದಿಂದ ಮುಂಬೈ ಹೊರ ಬಂದಿಲ್ಲ. ಅದು ಆಡಿರುವ ಆರು ಪಂದ್ಯಗಳಲ್ಲಿ 5ರಲ್ಲಿ ಸೋಲು ಅನುಭವಿಸಿದ್ದು, ಪ್ಲೇ ಆಫ್‌ನಿಂದ ದೂರ ಉಳಿಯಬೇಕಾದ ಭೀತಿಯನ್ನು ಎದುರಿಸುತ್ತಿದೆ. ಮುಂಬೈ ತಂಡವು ಚೆನ್ನೈ ವಿರುದ್ಧ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ತಂಡದ ಆರಂಭಿಕ ದಾಂಡಿಗ ಸೂರ್ಯಕುಮಾರ್ ಯಾದವ್ ಅವರನ್ನು ಹೊರತುಪಡಿಸಿ ತಂಡದ ಸಹ ಆಟಗಾರರು ಕಳಪೆ ಫಾರ್ಮ್ ಎದುರಿಸುತ್ತಿದ್ದಾರೆ.        

short by Prajwal / more at Newspoint

Comments