Skip to main content


ಜೈಲಿನ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ!

ಆರೋಪಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಕೇಂದ್ರ ಕಾರಾಗೃಹದ ಆವರಣದಲ್ಲಿ ನಡೆದಿದೆ. ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಪರಶುರಾಮ್ ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಈತ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಜೈಲು ಸೇರಿದ್ದ. ಆದರೆ ಈಗ ಜೈಲಿನ ಮುಂಭಾಗ ಇರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.      

short by NP / read more at Public TV

Comments