Skip to main content


ರಂಗೇರಿದ ಚುನಾವಣೆ ಕಣ, ಇಂದಿನಿಂದ ಮೋದಿ ಬಿರುಗಾಳಿ ಪ್ರವಾಸ

ವಿಧಾನಸಭೆ ಚುನಾವಣೆ ಕಣ ರಂಗೇರಿದೆ. ಮೇ 12 ರಂದು ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿಡುವಿಲ್ಲದೇ ಪ್ರಚಾರ ನಡೆಸಿದ್ದಾರೆ. ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ ಬಿರುಗಾಳಿ ಪ್ರವಾಸ ಕೈಗೊಂಡಿದ್ದಾರೆ. ಬೆಳಿಗ್ಗೆ 11.30 ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು ಹೆಲಿಕಾಪ್ಟರ್ ನಲ್ಲಿ ಚಾಮರಾಜನಗರ ಜಿಲ್ಲೆ ಸಂತೇಮರಹಳ್ಳಿಯಲ್ಲಿ ನಡೆಯಲಿರುವ ಬಿ.ಜೆ.ಪಿ. ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಮೈಸೂರಿಗೆ ವಾಪಸ್ ಆಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವರು. ಮಂಗಳೂರಿನಿಂದ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ಪ್ರಯಾಣ ಬೆಳೆಸಲಿದ್ದು, ಪಕ್ಷದ ಸಮಾವೇಶ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇಂದಿನಿಂದ ಪ್ರಚಾರ ಕೈಗೊಳ್ಳಲಿರುವ ಮೋದಿ ಮೇ 3, 5, 7 ಹಾಗೂ 8 ರಂದು ರಾಜ್ಯದಲ್ಲಿ ಪ್ರಚಾರ ನಡೆಸುವರು.             

short by Pawan / more at Kannadadunia

Comments