Skip to main content


ಕೈ,ಕಾಲು ಕಟ್ಟಿ ಇಸ್ಕಾನ್ ಅರ್ಚಕರ ಬರ್ಬರ ಹತ್ಯೆ

ಕೈ,ಕಾಲು ಕಟ್ಟಿ ಹಾಕಿ ಚಾಕುವಿನಿಂದ ಇರಿದು, ಇಸ್ಕಾನ್ ದೇವಾಲಯದ ಅರ್ಚಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಸಂಜಯ್ ಸತೀಶ್ ಕೊಲೆಯಾದ ವ್ಯಕ್ತಿ. ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ ಮೆಂಟ್ ನಲ್ಲಿ ಅವರು ವಾಸವಾಗಿದ್ದರು. ರಾತ್ರಿ ಅವರ ನಿವಾಸದಿಂದ ದುರ್ವಾಸನೆ ಬರುತ್ತಿದ್ದ ಕಾರಣ, ಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದಾಗ ಕೊಳೆತ ಸ್ಥಿತಿಯಲ್ಲಿದ್ದ ಸಂಜಯ್ ಸತೀಶ್ ಮೃತದೇಹ ಕಂಡು ಬಂದಿದೆ.ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

short by: Nithin / read more at Kannadadunia

Comments