Skip to main content


ಹರ್ಮನ್‌ಪ್ರೀತ್‌ ಮೋಡಿ: ಸೆಮಿಫೈನಲ್‌ ಪ್ರವೇಶಿಸಿದ ಪುರುಷರ ತಂಡ

ಪೆನಾಲ್ಟಿ ಕಾರ್ನರ್‌ ಅವಕಾಶಗಳನ್ನು ಗೋಲಾಗಿ ಪರಿವರ್ತಿಸಿದ ಡ್ರ್ಯಾಗ್‌ ಫ್ಲಿಕ್‌ ಪರಿಣತ ಆಟಗಾರ ಹರ್ಮನ್‌ಪ್ರೀತ್‌ ಸಿಂಗ್, ಭಾರತ ತಂಡ ಸಂಭ್ರಮದ ಹೊಳೆಯಲ್ಲಿ ಮಿಂದೇಳುವಂತೆ ಮಾಡಿದರು. ಗೋಲ್ಡ್‌ ಕೋಸ್ಟ್‌ ಹಾಕಿ ಕೇಂದ್ರದಲ್ಲಿ ಮಂಗಳವಾರ ನಡೆದ ಪುರುಷರ ‘ಬಿ’ ಗುಂಪಿನ ಪಂದ್ಯದಲ್ಲಿ ಭಾರತ 2–1 ಗೋಲುಗಳಿಂದ ಮಲೇಷ್ಯಾವನ್ನು ಸೋಲಿಸಿತು.

ಈ ಗೆಲುವಿನೊಂದಿಗೆ ಮನ್‌ಪ್ರೀತ್‌ ಸಿಂಗ್ ಪಡೆ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿತು. ಈ ಪಂದ್ಯದಲ್ಲಿ ಭಾರತ ಒಟ್ಟು ಒಂಬತ್ತು ಪೆನಾಲ್ಟಿ ಕಾರ್ನರ್‌ ಗಳಿಸಿತ್ತು. ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾದ ಭಾರತ ತಂಡ ಮೂರನೆ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ ಸೃಷ್ಟಿಸಿಕೊಂಡಿತ್ತು.         

Short by Prajwal / read more at Prajavani 

Comments