Skip to main content


ಬೀದರ್ ದಕ್ಷಿಣ ಕಾಂಗ್ರೆಸ್‌ ಟಿಕೆಟ್‌ಗೆ ಖೇಣಿ, ಚಂದ್ರಾಸಿಂಗ್ ಪೈಪೋಟಿ!

ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇವೆ. ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಬಿಸಿಲಿನ ತಾಪದಂತೆ ಚುನಾವಣೆಯ ಕಾವು ಹೆಚ್ಚುತ್ತಿದೆ. ಜಿಲ್ಲಾ ನಾಯಕರ ವಿರೋಧದ ನಡುವೆಯೂ ಖೇಣಿ ಕಾಂಗ್ರೆಸ್ ಸೇರಿದ್ದಾರೆ. ಈಗ ಟಿಕೆಟ್ ವಿಚಾರ ಬಂದಾಗ ಅಸಮಾಧಾನ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ನೈಸ್ ಸಂಸ್ಥೆ ಮುಖ್ಯಸ್ಥ ಅಶೋಕ್ ಖೇಣಿ ಕಾಂಗ್ರೆಸ್ ಸೇರಿದ್ದಾರೆ. ಬೀದರ್ ದಕ್ಷಿಣ ಕ್ಷೇತ್ರದ ಟಿಕೆಟ್‌ಗಾಗಿ ಚಂದ್ರಾಸಿಂಗ್ ಮತ್ತು ಅಶೋಕ್ ಖೇಣಿ ನಡುವೆ ಪ್ರಬಲ ಪೈಪೋಟಿ ನಡೆಯುತ್ತಿದೆ. ಯಾರಿಗೆ ಟಿಕೆಟ್ ಸಿಗಲಿದೆ? ಎಂದು ಕಾದು ನೋಡಬೇಕು.       

short by NP / read more at Oneindia

Comments