Skip to main content


ಏನು ನಡೆಯುತ್ತಿದೆ ಭಾರತದಲ್ಲಿ..? ಮತ್ತಿಬ್ಬರು ಮಕ್ಕಳ ಮೇಲೆ ಅತ್ಯಾಚಾರ, ಭೀಕರ ಕೊಲೆ

ಕತುವಾದಲ್ಲಿ ಎಂಟು ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕಗ್ಗೊಲೆ ವ್ಯಾಪಕ ಪ್ರತಿಭಟನೆ ಮತ್ತು ಆಕ್ರೋಶ ಮುಂದುವರಿದಿರುವಾಗಲೇ ಉತ್ತರ ಪ್ರದೇಶ ಮತ್ತು ಛತ್ತೀಸ್‍ಗಢದಲ್ಲಿ ಇಬ್ಬರು ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಮುಂದುವರಿದ ಹೇಯ ಕೃತ್ಯಗಳಿಂದಾಗಿ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ವಿವಾಹ ಸಮಾರಂಭಗಳಲ್ಲಿ ಭಾಗವಹಿಸಿದ್ದ ಒಂಭತ್ತು ಮತ್ತು ಹತ್ತು ವರ್ಷಗಳ ಮಕ್ಕಳ ಮೇಲೆ ಪ್ರತ್ಯೇಕ ಘಟನೆಗಳಲ್ಲಿ ಈ ಕೃತ್ಯ ನಡೆದಿರುವುದು ದೇಶವನ್ನು ಮತ್ತೊಮ್ಮೆ ಬೆಚ್ಚಿ ಬೀಳಿಸಿದೆ.  

short by Pawan / read more at Eesanje

Comments