Skip to main content


ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಕರೆ!?

ಇತ್ತೀಚಗಷ್ಟೇ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರ ಬೆಂಗಾವಲು ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದಿತ್ತು. ಇದೀಗ ಅನಂತ್ ಕುಮಾರ್ ಹೆಗಡೆಗೆ ಜೀವ ಬೆದರಿಕೆ ಕರೆ ಬಂದಿದೆಯಂತೆ. ಇಂಟರ್ ನೆಟ್ ಕಾಲ್ ಮಾಡುವ ಮೂಲಕ ಸಚಿವರ ಮೊಬೈಲ್ ನಂಬರ್ ಹಾಗೂ ಲ್ಯಾಂಡ್ ಲೈನ್ ನಂಬರ್ ಗೆ ಮೂರು ಬಾರಿ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿದೆ. ಈ ಸಂಬಂಧ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ನಿನ್ನೆ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

short by Shraman / more at Kannadanewsnow


Comments