Skip to main content


ಇಂದು ಕೋಲ್ಕತಾ ನೈಟ್ ರೆಡರ್ಸ್ VS ರಾಜಸ್ಥಾನ್ ರಾಯಲ್ಸ್: ಹ್ಯಾಟ್ರಿಕ್ ಗೆಲುವಿನತ್ತ ರಾಜಸ್ಥಾನ ಚಿತ್ತ

ಭರ್ಜರಿ ಫಾರ್ಮ್‌ನಲ್ಲಿರುವ ರಾಜಸ್ಥಾನ ರಾಯಲ್ಸ್ ತಂಡ ಬುಧವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದ್ದು, ಹ್ಯಾಟ್ರಿಕ್ ಗೆಲುವಿನತ್ತ ಚಿತ್ತವಿರಿಸಿದೆ. ರಾಯಲ್ಸ್ ಐಪಿಎಲ್‌ನ ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡದ ವಿರುದ್ಧ ಸೋತಿತ್ತು. ಆ ಬಳಿಕ ಸತತ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿ ಹ್ಯಾಟ್ರಿಕ್ ಗೆಲುವಿನತ್ತ ಮುಖ ಮಾಡಿದೆ. ಮಳೆಬಾಧಿತ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ 10 ರನ್‌ಗಳಿಂದ ಜಯ ಸಾಧಿಸಿರುವ ರಾಜಸ್ಥಾನ ತಂಡ ಸ್ಟಾರ್ ಆಟಗಾರರನ್ನು ಒಳಗೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 19 ರನ್‌ಗಳಿಂದ ಸೋಲಿಸಿತ್ತು. ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ 49 ಎಸೆತಗಳಲ್ಲಿ 92 ರನ್ ಗಳಿಸಿ ರಾಯಲ್ಸ್ ತಂಡದ ಗೆಲುವಿಗೆ ಮಹತ್ವದ ಕೊಡುಗೆ ನೀಡಿದ್ದರು.

short by Prajwal / read more at Varthabharathi

Comments