Skip to main content


ಸುಳ್ಳು ಸುದ್ದಿ ಪ್ರಕಟಿಸಿದರೆ ಪತ್ರಕರ್ತರ ಮಾನ್ಯತೆ ರದ್ದು: ಕೇಂದ್ರ

ಸುಳ್ಳು ಸುದ್ದಿ ಸೃಷ್ಟಿಸುವ ಮತ್ತು ಹರಡುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಸುಳ್ಳು ಸುದ್ದಿ ಪ್ರಕಟಿಸಿದ ಅಥವಾ ಪ್ರಸಾರ ಮಾಡಿದ ಆರೋಪ ಸಾಬೀತಾದರೆ, ಮೊದಲ ತಪ್ಪಿಗೆ ಆರು ತಿಂಗಳ ಮಟ್ಟಿಗೆ ಮತ್ತು ಎರಡನೇ ಬಾರಿಯ ತಪ್ಪಿಗೆ ಒಂದು ವರ್ಷದ ಮಟ್ಟಿಗೆ ಮಾನ್ಯತೆ ರದ್ದು ಮಾಡಲಾಗುವುದು. ಮೂರನೇ ಬಾರಿಗೆ ತಪ್ಪು ಮಾಡಿದಲ್ಲಿ ಶಾಶ್ವತವಾಗಿ ಮಾನ್ಯತೆ ರದ್ದು ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.    

short by NP / read more at Prajavani

Comments