Skip to main content


ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾನುವಾರವಿಡೀ ದೇವಾಲಯಗಳಿಗೆ ಭೇಟಿ ಪೂಜೆ ಸಲ್ಲಿಸಿದ್ದೇಕೆ..!?

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭಾನುವಾರ ಅವರು ಭೇಟಿ ನೀಡಿದ ಸಂದರ್ಭದಲ್ಲಿ ದೇವಾಲಯದ ಅರ್ಚಕರು ಮಹಾಪ್ರಸಾದ ನೀಡಿದರು. ಉಡುಪಿಯ ಹಿರಿಯಡ್ಕ ವೀರಭದ್ರೇಶ್ವರ ದೇವಾಲಯವನ್ನು ಜೀರ್ಣೋದ್ಧಾರ ಮಾಡಲಾಗಿದ್ದು, ದೇವಾಲಯಕ್ಕೆ ಭೇಟಿ ನೀಡಿದ್ದ ದರ್ಶನ್ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳಿಂದ ಆಶೀರ್ವಾದ ಪಡೆದರು. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀಮಂಜುನಾಥ ಸ್ವಾಮಿ ದರ್ಶನ ಪಡೆದ ಅವರು, ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ್ದಾರೆ. ದರ್ಶನ್ ಅವರೊಂದಿಗೆ ಸೃಜನ್ ಲೋಕೇಶ್ ಮೊದಲಾದವರು ಇದ್ದರು.   

short by Pawan / more at Just Kannada

Comments