Skip to main content


ಕ್ಯಾಪ್ಟನ್ ಡೆಬ್ಯು ದಾಖಲೆಯ "ಶ್ರೇಯಸ್ಸು"

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಚ್ ಚಾಂಪಿಯನ್‌ಶಿಪ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್‌ನ ಯುವ ನಾಯಕ ಶ್ರೇಯಸ್ ಅಯ್ಯರ್, ಅನೇಕ ದಾಖಲೆಗಳನ್ನು ಪುಡಿಗೈದಿದ್ದಾರೆ. ನಾಯಕನಾಗಿ ಆಡಿದ ಮೊದಲ ಪಂದ್ಯದಲ್ಲೇ ಅತಿ ಹೆಚ್ಚು ರನ್ ಗಳಿಸಿದ ದಾಖಲೆಗೆ ಶ್ರೇಯಸ್ ಪಾತ್ರವಾಗಿದ್ದಾರೆ.  ಇಲ್ಲಿನ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ ಕೋಲ್ಕೊತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಶ್ರೇಯಸ್ ಕೇವಲ 40 ಎಸೆತಗಳಲ್ಲಿ 93 ರನ್ ಗಳಿಸಿ ಅಜೇಯರಾಗುಳಿದಿದ್ದರು. ಶ್ರೇಯಸ್ ಸಿಡಿಲಬ್ಬರದ ಇನ್ನಿಂಗ್ಸ್‌ನಲ್ಲಿ ಮೂರು ಬೌಂಡರಿ ಹಾಗೂ 10 ಭರ್ಜರಿ ಸಿಕ್ಸರ್‌ಗಳು ಸೇರಿದ್ದವು.

short by Prajwal / more at Newspoint

Comments